Ondee Samane

Ondee Samane

Sonu Nigam

Альбом: Galipata
Длительность: 4:28
Год: 2017
Скачать MP3

Текст песни

ಒಂದೇ ಸಮನೇ ನಿಟ್ಟುಸಿರು ಪಿಸುಗುಡುವ ತೀರದ ಮೌನ
ತುಂಬಿ ತುಳುಕೋ ಕಂಗಳಲಿ ಕರಗುತಿದೆ ಕನಸಿನ ಬಣ್ಣ
ಎದೆಯ ಜೋಪಡಿಯ ಒಳಗೆ ಕಾಲಿಡದೆ ಕೊಲುತಿದೆ ಒಲವು
ಮನದ ಕಾರ್ಮುಗಿಲಿನ ತುದಿಗೆ ಮಳೆಬಿಲ್ಲಿನಂತೆ ನೋವು
ಕೊನೆಯಿರದ ಏಕಾಂತವೆ ಒಲವೇ

ಒಂದೇ ಸಮನೇ ನಿಟ್ಟುಸಿರು ಪಿಸುಗುಡುವ ತೀರದ ಮೌನ
ತುಂಬಿ ತುಳುಕೋ ಕಂಗಳಲಿ ಕರಗುತಿದೆ ಕನಸಿನ ಬಣ್ಣ

ಜೀವ ಕಳೆವ ಅಮೃತಕೆ ಒಲವೆಂದು ಹೆಸರಿಡಬಹುದೇ
ಪ್ರಾಣ ಉಳಿಸೋ ಕಾಯಿಲೆಗೆ ಪ್ರೀತಿ ಎಂದೆನ್ನಬಹುದೇ
ಹೊಂಗನಸ ಚಾದರದಲ್ಲಿ ಮುಳ್ಳಿನ ಹಾಸಿಗೆಯಲಿ ಮಲಗಿ
ಯಾತನೆಗೆ ಮುಗುಳ್ನಗು ಬರಲು ಕಣ್ಣಾ ಹನಿ ಸುಮ್ಮನೆ ಒಣಗಿ
ಅವಳನ್ನೇ ಜಪಿಸುವುದೆ ಒಲವೇ

ಜೀವ ಕಳೆವ ಅಮೃತಕೆ ಒಲವೆಂದು ಹೆಸರಿಡಬಹುದೇ
ಪ್ರಾಣ ಉಳಿಸೋ ಕಾಯಿಲೆಗೆ ಪ್ರೀತಿ ಎಂದೆನ್ನಬಹುದೇ

ನಾಲ್ಕು ಪದದ ಗೀತೆಯಲಿ ಮಿಡಿತಗಳ ಬಣ್ಣಿಸಬಹುದೇ
ಮೂರು ಸ್ವರದ ಹಾಡಿನಲಿ ಹೃದಯವನು ಹರಿಬಿಡಬಹುದೇ
ಉಕ್ಕಿ ಬರುವ ಕಂಠದಲಿ ನರಳುತಿದೆ ನಲುಮೆಯ ಗಾನ
ಬಿಕ್ಕಳಿಸುವ ಎದೆಯೊಳಗೆ ನಗುತಲಿದೆ ಮಡಿದ ಕವನ
ಒಂಟಿತನದ ಗುರುವೇ
ಒಲವೇ