Aakasha Neene

Aakasha Neene

V. Harikrishna

Длительность: 4:42
Год: 2009
Скачать MP3

Текст песни

ಆಕಾಶ ನೀನೆ ನೀಡೊಂದು ಗೂಡು
ಬಂತೀಗ ಪ್ರೀತಿ ಹಾರಿ
ತಂಗಾಳಿ ನೀನೆ ನೀಡೊಂದು ಹಾಡು
ಕಂಡಿತು ಕಾಲುದಾರಿ
ಒಂದಾದ ಜೀವ ಹೂವಾಗುವಂತೆ ಎಂದು ಕಾಪಾಡಲಿ
ಪ್ರೀತಿಯ ಅಂಬಾರಿ

ಆಕಾಶ ನೀನೆ ನೀಡೊಂದು ಗೂಡು
ಬಂತೀಗ ಪ್ರೀತಿ ಹಾರಿ

ಕಣ್ಣಿನಲ್ಲಿ ಕಣ್ಣಿರೆ ಲೋಕವೆಲ್ಲ ಹೂ ಹಂದರ
ಭಾವವೊಂದೇ ಆಗಿರೆ, ಬೇಕೇ ಬೇರೆ ಭಾಷಾಂತರ
ಎದೆಯಿಂದ ಹೊರ ಹೋಗೋ ಉಸಿರೆಲ್ಲ ಕನಸಾಗಲಿ
ಈ ಪ್ರೀತಿ ಜೊತೆಯಲ್ಲೇ ಒಂದೊಂದು ನನಸಾಗಲಿ
ಕೊನೆಯಿಲ್ಲದ ಕುಶಲೋಪರಿ ಪ್ರೀತಿಯ ಅಂಬಾರಿ

ಆಕಾಶ ನೀನೆ ನೀಡೊಂದು ಗೂಡು
ಬಂತೀಗ ಪ್ರೀತಿ ಹಾರಿ
ತಂಗಾಳಿ ನೀನೆ ನೀಡೊಂದು ಹಾಡು
ಕಂಡಿತು ಕಾಲುದಾರಿ

ಕಾಣದಂತ ಹೊಸ್ತಿಲು ದೂರದಿಂದ ಬಾ ಎಂದಿದೆ
ಪೆದ್ದು ಮೊದ್ದು ಜೋಡಿಗೆ ಸಿಕ್ಕ ಪ್ರೀತಿ ಸೊಗಸಾಗಿದೆ
ಆ ಸೂರ್ಯ ಸರಿದಾಗ ಈ ಪ್ರೇಮ ರೋಮಾಂಚನ
ಮುಸ್ಸಂಜೆ ಕವಿದಾಗ ಈ ಪ್ರೇಮ ನೀಲಾಂಜನ
ಮುಂದರಿಯುವ ಕಾದಂಬರಿ ಪ್ರೀತಿಯ ಅಂಬಾರಿ

ಆಕಾಶ ನೀನೆ ನೀಡೊಂದು ಗೂಡು
ಬಂತೀಗ ಪ್ರೀತಿ ಹಾರಿ
ತಂಗಾಳಿ ನೀನೆ ನೀಡೊಂದು ಹಾಡು
ಕಂಡಿತು ಕಾಲುದಾರಿ
ಒಂದಾದ ಜೀವ ಹೂವಾಗುವಂತೆ ಎಂದು ಕಾಪಾಡಲಿ
ಪ್ರೀತಿಯ ಅಂಬಾರಿ